ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ನಗರ ಮೂಲದ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ರೇವಣ್ಣ ಸೂಚನೆ ಮೇರೆಗೆ ಮಹಿಳೆ ಅಪಹರಣ ಮಾಡಲಾಗಿತ್ತು ಎಂದು ಉಲ್ಲೇಖಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಪಾತ್ರವೂ ಇದೆ ಎಂದು ಉಲ್ಲೇಖಿಸಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ರೇವಣ್ಣ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.