ಬೆಳಗಾವಿ: ಆಟವಾಡಲು ಕಾಲುವೆಗೆ ಇಳಿದ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮತ್ತಿಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ.
ಬೆಳಗಾವಿ ಜಿಲ್ಲೆ ಕೋಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪದ ಕರಿಮಸೂತಿ ಕಾಲುವೆ ಬಳಿ ಆಟವಾಡಲು ಹೋಗಿದ್ದ ವಿಜಯ(7) ಮತ್ತು ಸ್ವಪ್ನಾ(11) ಮೃತಪಟ್ಟವರು ಎಂದು ಹೇಳಲಾಗಿದೆ.
ಶ್ರೀಧರ(3) ಮತ್ತು ವಿಶ್ವನಾಥ(8) ಅವರನ್ನು ರಕ್ಷಿಸಲಾಗಿದೆ. ತುಂಬಿ ಹರಿಯುತ್ತಿದ್ದ ಕಾಲುವೆಯ ಬಳಿ ಆಟವಾಡಲು ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಇಬ್ಬರನ್ನು ರಕ್ಷಿಸಲಾಗಿದೆ. ಮೃತಪಟ್ಟ ವಿಜಯ, ಸ್ವಪ್ನಾ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.