ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಾತ್ರ ಮಳೆಯಾಗುತ್ತಿದ್ದು, ರಾಜ್ಯದಾದ್ಯಂತ ಮಳೆಯಾಗಲೆಂದು ಪ್ರಾರ್ಥಿಸಿ ಇಂದು ‘ಮಳೆ ದೇವರಿಗೆ’ ಸರ್ಕಾರದಿಂದ ವಿಶೇಷ ಪೂಜೆ ಸಲ್ಲಿಸಲಾಗುವುದು.
ಎಲ್ಲೆಡೆ ಉತ್ತಮ ಮಳೆಗಾಗಿ ಇಂದು ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುವುದು. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುವುದು. ಸರ್ಕಾರದ ಪರವಾಗಿ ಸಚಿವರು ಪೂಜೆ ಸಲ್ಲಿಸಲಿದ್ದಾರೆ.
ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಳೆಗಾಗಿ ಪೂಜೆ ಸಲ್ಲಿಸಿದ್ದರು. ಅತಿವೃಷ್ಟಿ, ಅನಾವೃಷ್ಟಿ ವೇಳೆ ದೇಗುಲದಲ್ಲಿ ಸ್ಥಳೀಯರು ಪೂಜೆ ಸಲ್ಲಿಸುತ್ತಾರೆ. ಮಳೆ ದೇವರು ಎಂದೇ ಹೆಸರು ಪಡೆದಿರುವ ಋಷ್ಯಶೃಂಗೇಶ್ವರ ದೇಗುಲದಲ್ಲಿ ಮಳೆಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸುವುದು ಹಿಂದಿನಿಂದಲೂ ಬೆಳೆದು ಬಂದಿದೆ.