‘ಕರಿಮಣಿ ಮಾಲೀಕ ನೀನಲ್ಲ…..’ ಹಾಡಿಗೆ ರೀಲ್ಸ್ ಮಾಡಿ ಗಮನ ಸೆಳೆದ ಇಂಟರ್ನೆಟ್ ಸೆನ್ಸೇಷನ್ ಕಿಲಿ ಪೌಲ್

ಇತ್ತೀಚಿನ ದಿನಗಳಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಓ ನಲ್ಲ, ನೀ ನಲ್ಲ, ಕರಿಮಣಿ ಮಾಲೀಕ ನೀನಲ್ಲ’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೆಂಡ್ ಸೃಷ್ಟಿಸಿದೆ. ಅದರಲ್ಲಿಯೂ ಈ ಹಾಡಿಗೆ ತಮ್ಮದೇ ರೀತಿಯಲ್ಲಿ ರೀಲ್ಸ್ ಮಾಡುವ ಮೂಲಕ ಸೋಷಿಯಲ್ ಮೀಡಿಯಾಗಳಲ್ಲಿ ಅಪ್ ಲೋಡ್ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ಇದೀಗ ಈ ಹಾಡಿಗೆ ಇಂಟರ್ನೆಟ್ ಸೆನ್ಸೇಷನ್ ಕಿಲಿ ಪೌಲ್ ಕೂಡ ರೀಲ್ಸ್ ಮಾಡುವ ಮೂಲಕ ಸೋಷಿಯಲ್ ಮೀಡಿಯಾಗಳಲ್ಲಿ ಧೂಳೆಬ್ಬಿಸಿದ್ದಾರೆ.

ದಕ್ಷಿಣ ಆಫ್ರಿಕಾದ ತಾಂಜೇನಿಯಾದ ಸೋಷಿಯಲ್ ಮೀಡಿಯಾ ಸ್ಟಾರ್ ಕಿಲಿ ಪೌಲ್, ಕನ್ನಡದ ‘ಓ ನಲ್ಲ, ನೀ ನಲ್ಲ, ಕರಿಮಣಿ ಮಾಲೀಕ ನೀನಲ್ಲ…..’ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಸ್ವತಃ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶೇರ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನು ಕಿಲಿ ಪೌಲ್ ತಾಂಜೇನಿಯಾ ಮೂಲದ ಗಾಯಕರಾಗಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಭಾರತೀಯ ಹಾಡುಗಳಿಗೆ ಲಿಪ್ ಸಿಂಕ್ ಮಾಡುವ ಮೂಲಕ ಹಾಗೂ ನೃತ್ಯದ ಮೂಲಕ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದಾರೆ. ಇತ್ತೀಚೆಗೆ ಭಾರತೀಯ ಹೈಕಮಿಷನ್ ಕೂಡ ಕಿಲಿ ಪೌಲ್ ಅವರನ್ನು ಗೌರವಿಸಿದೆ.

ಕಿಲಿ ಪೌಲ್ ಅವರ ಸಹೋದರಿ ನೀಮಾ ಪೌಲ್ ಕೂಡ ಭಾರತೀಯ ಹಾಡುಗಳಿಗೆ ಲಿಪ್-ಸಿಂಕ್ ಮಾಡುವುದು ಹಾಗೂ ಪ್ರಸಿದ್ಧ ಡೈಲಾಗ್‌ಗಳಿಗೆ ಅಭಿನಯಿಸುವ ಮೂಲಕ ಸೋಷಿಯಲ್ ಮೀಡಿಯಾಗಳಲ್ಲಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಕಿಲಿ ಪೌಲ್ ತಮ್ಮ ಸಹೋದರಿ ನೀಮಾ ಪೌಲ್ ಅವರೊಂದಿಗೆ ಬಾಲಿವುಡ್ ನ ಜಲೇಬಿ ಚಿತ್ರದ ಹಾಡಿಗೆ ಲಿಪ್ ಸಿಂಕ್ ಮಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ಜನವರಿ 26 ರಂದು, ತಮ್ಮ ಸಹೋದರಿ ನೀಮಾ ಪೌಲ್ ಜೊತೆ ಗಣರಾಜ್ಯೋತ್ಸವದ ವೀಡಿಯೊವನ್ನು ಅಪ್ಲೋಡ್ ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read