ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಯುವತಿಯನ್ನು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ನಿವಾಸಿ 19 ವರ್ಷದ ಯುವತಿ ಕೊಲೆಯಾದವರು.
ಅಜಯ್ ಎಂಬಾತ ಆಟೋದಲ್ಲಿ ಅಪಹರಿಸಿ ಅತ್ಯಾಚಾರವೆಸಗಿ ಹಲ್ಲೆ ಮಾಡಿದ್ದ. ನಂತರ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದ. ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ ಬ್ರೈನ್ ಡೆಡ್ ಆಗಿ ಯುವತಿ ಸಾವನ್ನಪ್ಪಿದ್ದಾಳೆ.
ನಿನ್ನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಕೊನೆಯುಸಿರೆಳೆದಿದ್ದಾರೆ. ಚಿತ್ರದುರ್ಗ ಮಹಿಳಾ ಠಾಣೆಗೆ ಯುವತಿ ಪೋಷಕರು ದೂರು ನೀಡಿದ್ದಾರೆ. ಆರೋಪಿ ಅಜಯ್ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.