alex Certify ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರ್ ಗೆ ಬೆಂಕಿ; 5 ಮಂದಿ ಸಾವು, ಮೂವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರ್ ಗೆ ಬೆಂಕಿ; 5 ಮಂದಿ ಸಾವು, ಮೂವರು ಗಂಭೀರ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕಾರ್ ಗೆ ಬೆಂಕಿ ತಗುಲಿ 5 ಮಂದಿ ಸಾವನ್ನಪ್ಪಿದ್ದಾರೆ. ಪುತಲಪಟ್ಟು -ನಾಯ್ಡು ಪೇಟೆ ಹೆದ್ದಾರಿಯ ಚಂದ್ರಗಿರಿ ವಲಯದ ಅಗರಾಳದಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಈ ವೇಳೆ ಕಾರ್ ಗೆ ಏಕಾಏಕಿ ಬೆಂಕಿ ತಗುಲಿದೆ.

ಬೆಂಕಿ ಜ್ವಾಲೆ ಕಾರ್ ಗೆ ವ್ಯಾಪಿಸಿದ್ದು ಕಾರ್ ನಲ್ಲಿದ್ದ 1 ವರ್ಷದ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ರುವಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರು ವಿಜಯನಗರ ಜಿಲ್ಲೆಯ ನಿವಾಸಿಗಳೆಂದು ಹೇಳಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಸುಟ್ಟು ಕರಕಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...