
ಹೈದರಾಬಾದ್: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರರಿಗೂ ವಿಸ್ತರಿಸಲಾಗುವುದು ಎಂದು ಕೇಂದ್ರ ಮೀನುಗಾರಿಕೆ ಮತ್ತು ಪಶುಸಂಗೋಪನೆ ಖಾತೆಯ ಸಹಾಯಕ ಸಚಿವ ಮುರುಗನ್ ತಿಳಿಸಿದ್ದಾರೆ.
ರೈತರಿಗಾಗಿ ಅನುಕೂಲವಾಗುವಂತೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸೌಲಭ್ಯ ಕಲ್ಪಿಸಲಾಗಿದ್ದು, ಈ ಸೌಲಭ್ಯವನ್ನು ಮೀನುಗಾರರಿಗೆ ವಿಸ್ತರಿಸಲಾಗುವುದು. ದೇಶದ ಎಲ್ಲಾ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಕಲ್ಪಿಸಲಾಗುತ್ತದೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲಾಗುತ್ತಿದ್ದು, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದರು.