
ಶಿವಮೊಗ್ಗ: ಭಾರತ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದೆ. ಅರ್ಹ ರೈತರು(ಸಣ್ಣ, ಅತಿ ಸಣ್ಣ, ಮಧ್ಯಮ, ದೊಡ್ಡ ರೈತರು) ಯೋಜನೆಯ ಲಾಭ ಪಡೆದುಕೊಳ್ಳಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಿದೆ.
ಈ ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತ ಕುಟುಂಬಕ್ಕೆ ಒಂದು ವರ್ಷಕ್ಕೆ 6 ಸಾವಿರ ರೂಪಾಯಿಗಳನ್ನು ಪ್ರತಿ 4 ತಿಂಗಳಿಗೊಮ್ಮೆ ತಲಾ 2 ಸಾವಿರ ರೂಪಾಯಿಯಂತೆ 3 ಕಂತುಗಳಲ್ಲಿ ನೀಡಲಾಗುವುದು.
ಈಗಾಗಲೇ ಕೇಂದ್ರ ಸರ್ಕಾರದಿಂದ ಹಲವು ಕಂತುಗಳು ಬಿಡುಗಡೆಯಾಗಿದ್ದು, ತಮ್ಮ ಕೊನೆಯ ಕಂತು ಪಾವತಿಯಾಗದೇ payment stopped by state on request ಎಂಬ ಸಂದೇಶ ಬಂದಿದ್ದಲ್ಲಿ ಕೂಡಲೇ ತಮ್ಮ ಸೂಕ್ತ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ.
ಜಮೀನು ಖಾತೆ, ಪಹಣಿ, ಸರ್ವೆ ನಂಬರ್, ಬ್ಯಾಂಕ್ ಖಾತೆ ವಿವರ, ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಲು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.