ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ಕೇಂದ್ರ ಸರ್ಕಾರ ರೈತರ ಖಾತೆಗೆ ವಾರ್ಷಿಕ ಮೂರು ಕಂತುಗಳಲ್ಲಿ 6000 ರೂ. ಜಮಾ ಮಾಡಲಿದೆ.
ದೇಶದ 14.5 ಕೋಟಿ ರೈತರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಸದ್ಯದಲ್ಲೇ ರೈತರ ಖಾತೆಗೆ ಮತ್ತೊಂದು ಕಂತಿನ ಹಣ ಜಮಾ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮಾತನಾಡಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವಾದ ಡಿಸೆಂಬರ್ 25 ರಂದು ದೇಶದ ರೈತರನ್ನು ಉದ್ದೇಶಿಸಿ ನಾನು ಮಾತನಾಡಲಿದ್ದೇನೆ. ಅದೇ ದಿನ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಕಂತಿನ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಡಿಸೆಂಬರ್ 25ರಂದು ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ತಲಾ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತದೆ ಎನ್ನಲಾಗಿದೆ.