
ಬೆಳಗಾವಿ: ಮುಂದಿನ ವರ್ಷದಿಂದ ರಾಜ್ಯಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಯುತ್ತಿರುವ ಕಿತ್ತೂರು ಉತ್ಸವದಲ್ಲಿ ಅವರು ಮಾತನಾಡಿ, ಒಂದು ತಿಂಗಳ ಕಾಲ ಕಿತ್ತೂರು ಜ್ಯೋತಿ ರಾಜ್ಯದಲ್ಲಿ ಸಂಚರಿಸಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.