alex Certify BIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಂ ಟಂ ವಾಹನ; ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಂ ಟಂ ವಾಹನ; ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಟಂ ಟಂ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ.

21 ವರ್ಷದ ಕಾವೇರಿ ಕಾಜಗಾರ ಮೃತ ವಿದ್ಯಾರ್ಥಿನಿ. ಕಿತ್ತೂರು ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿ. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ವಿದ್ಯಾರ್ಥಿನಿಗೆ ಟಂ ಟಂ ವಾಹನ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಿದ್ದ ವಿದ್ಯಾರ್ಥಿನಿ ಮೇಲೆಯೇ ವಾಹನ ಹರಿದಿದೆ.

ವಿದ್ಯಾರ್ಥಿನಿ ಕಾವೇರಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಟಂ ಟಂ ವಾಹನ ಚಾಲಕ ಅನಿಲ್ ಎಂಬಾತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಚಾಲಕನನ್ನು ವಶಕ್ಕೆ ಪಡೆದ ಕಿತ್ತೂರು ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...