ಹಾಸನ: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಿದ್ದು, ವಿದ್ಯುತ್ ಕೊರತೆಯಾದಲ್ಲಿ ನೆರೆ ರಾಜ್ಯಗಳಿಂದ ವಿದ್ಯುತ್ ಪಡೆಯಲು ಪ್ರಯತ್ನಿಸುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಅರಸೀಕೆರೆ ತಾಲೂಕಿನ ದಾಸೇನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೌರಶಕ್ತಿಯಿಂದ 1300 ಮೆಗಾ ವ್ಯಾಟ್ ವಿದ್ಯುತ್ ಪಡೆದಿದ್ದೇವೆ. ವಿದ್ಯುತ್ ಕೊರತೆಯಾದಲ್ಲಿ ಅನ್ಯ ರಾಜ್ಯಗಳಿಂದ ಸಾಲ ಪಡೆದು 2024ರಲ್ಲಿ ವಾಪಸ್ ನೀಡಲಾಗುವುದು. ಈ ಕುರಿತಾಗಿ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.
ವಿದ್ಯುತ್ ಬೇಡಿಕೆ ಸರಿದೂಗಿಸುವ ನಿಟ್ಟಿನಲ್ಲಿ ಬೇರೆ ರಾಜ್ಯಗಳ ಜೊತೆಗೆ ಮಾತುಕತೆ ನಡೆದಿದೆ. ಆಗಲೂ ವಿದ್ಯುತ್ ಕೊರತೆಯಾದಲ್ಲಿ ಗ್ರಿಡ್ ನಿಂದ ವಿದ್ಯುತ್ ಪಡೆಯಬೇಕಿದ್ದು, ಈ ನಿಟ್ಟಿನಲ್ಲಿಯೂ ಪ್ರಯತ್ನ ನಡೆದಿದೆ. ರಾಜ್ಯದಲ್ಲಿ 4 ಲಕ್ಷ ಅಕ್ರಮ ಪಂಪ್ಸೆಟ್ ಸಕ್ರಮಕ್ಕೆ ಅರ್ಜಿ ಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.