
ಬೀದರ್: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರಗಾ ತಾಲೂಕಿನ ಬಳಿ ಕೆಎಸ್ಆರ್ಟಿಸಿ ಘಟನೆ ನಡೆದಿದೆ.
ಬಸ್ ನಲ್ಲಿದ್ದ 48 ಜನ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ ಬಸ್ ತೆರಳುತ್ತಿತ್ತು. ಈ ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಹಾರಾಷ್ಟ್ರಕ್ಕೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ.
ರಾತ್ರಿಯಿಂದಲೇ ಕರ್ನಾಟಕ -ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ. ವ್ಯವಸ್ತಾಪಕ ನಿರ್ದೇಶಕ ಎಂ. ರಾಚಪ್ಪ ತಿಳಿಸಿದ್ದಾರೆ.