ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ(ಕೆ.ಕೆ.ಆರ್.ಟಿ.ಸಿ.) ಸಿಬ್ಬಂದಿಗೆ ಒಂದು ಕೋಟಿ ರೂಪಾಯಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.
ಪ್ರೀಮಿಯಂ ರಹಿತ ಒಂದು ಕೋಟಿ ರೂಪಾಯಿ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಜೊತೆ ಕೆಕೆಆರ್ಟಿಸಿ ಒಪ್ಪಂದ ಮಾಡಿಕೊಂಡಿದೆ. ಸಾರಿಗೆ ಸಚಿವರ ರಾಮಲಿಂಗಾರೆಡ್ಡಿ ಅವರ ಸಮ್ಮುಖದಲ್ಲಿ ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಭಾಗೀಯ ಪ್ರಧಾನ ವ್ಯವಸ್ಥಾಪಕ ಮನೋಜ್ ಕುಮಾರ್ ಅವರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈಗಾಗಲೇ ಕೆಎಸ್ಆರ್ಟಿಸಿ, ಬಿಎಂಟಿಸಿ ಸಿಬ್ಬಂದಿಗೆ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗಿದೆ ಎನ್ನಲಾಗಿದೆ.