alex Certify ಮುಂಬೈ ವಿರುದ್ಧದ ಪಂದ್ಯದಲ್ಲೂ ಅಬ್ಬರಿಸಿದ ಕನ್ನಡಿಗ ರಾಹುಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬೈ ವಿರುದ್ಧದ ಪಂದ್ಯದಲ್ಲೂ ಅಬ್ಬರಿಸಿದ ಕನ್ನಡಿಗ ರಾಹುಲ್

ಮುಂಬೈ ವಿರುದ್ಧದ ಹಿಂದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ಲಖನೌ ಸೂಪರ್ ಜಾಯಿಂಟ್ಸ್ ತಂಡದ ಸ್ಟಾರ್ ಆಟಗಾರ ಕನ್ನಡಿಗ ಕೆ.ಎಲ್. ರಾಹುಲ್ ಭಾನುವಾರದಂದು ಅದೇ ತಂಡದ ವಿರುದ್ಧ ನಡೆದ ಮತ್ತೊಂದು ಪಂದ್ಯದಲ್ಲಿ ಅಜೇಯ 103 ರನ್ ಬಾರಿಸಿದ್ದಾರೆ. ಈ ಮೂಲಕ ತಮ್ಮ ತಂಡದ ಗೆಲುವಿಗೆ ಕಾರಣಕರ್ತರಾಗಿದ್ದಾರೆ.

ಮುಂಬೈನ ವಾಂಖಡೆ ಸ್ಟೇಡಿಯಂ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ ಜಾಯಿಂಟ್ಸ್ ತಂಡ ಆರು ವಿಕೆಟ್ ನಷ್ಟಕ್ಕೆ 168 ರನ್ ಕಲೆ ಹಾಕಿತು. ಈ ಪೈಕಿ ಕೆ.ಎಲ್. ರಾಹುಲ್ ಅವರದ್ದೇ 103 ರನ್ನುಗಳು ಎಂಬುದು ಗಮನಾರ್ಹ.

BIG NEWS: ಸಿದ್ದರಾಮಯ್ಯ ಪರ MLC ಹೆಚ್.ವಿಶ್ವನಾಥ್ ಬ್ಯಾಟಿಂಗ್

ಬಳಿಕ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ನಷ್ಟಕ್ಕೆ ಕೇವಲ 132 ರನ್ ಗಳಿಸಿದ್ದು, 36 ರನ್ನುಗಳ ಅಂತರದಿಂದ ಪರಾಭವಗೊಂಡಿತು. ಮುಂಬೈ ಇಂಡಿಯನ್ಸ್ ತಂಡ ಈವರೆಗೆ ತಾನಾಡಿದ ಎಂಟು ಪಂದ್ಯಗಳಲ್ಲೂ ಪರಾಭವಗೊಂಡಿದ್ದು, ಭಾನುವಾರದಂದು ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ತನ್ನ ಹೋರಾಟವನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...