ಹೊಸಪೇಟೆ: ಮನೆಗೊಂದು ಆಕಳು ಸಾಕಣೆ ಯೋಜನೆಗೆ ಚಿಂತನೆ ನಡೆದಿದೆ ಎಂದು ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ್ ತಿಳಿಸಿದ್ದಾರೆ.
ಕೊಟ್ಟೂರಿನಲ್ಲಿ ಮಾತನಾಡಿದ ಅವರು, ಪ್ರತಿದಿನ ಒಂದು ಕೋಟಿ ಲೀಟರ್ ಸಾಮರ್ಥ್ಯದಲ್ಲಿ ಹಾಲು ಉತ್ಪಾದನೆಯ ಗುರಿ ಹೊಂದಿರುವ ಕೆಎಂಎಫ್ ಇದಕ್ಕೆ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಪ್ರತಿ ಮನೆಗೆ ಒಂದರಂತೆ ಆಕಳು ಸಾಕಲು ಪ್ರೋತ್ಸಾಹಿಸುವ ಯೋಜನೆ ಜಾರಿಗೆ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಹಾಲಿ ಹಾಲು ಒಕ್ಕೂಟಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ ಸೇರಿ ಬೇರೆ ಯಾವುದೇ ಒಕ್ಕೂಟಗಳನ್ನು ವಿಭಜಿಸುವ ಪ್ರಸ್ತಾಪ ಇಲ್ಲ ಎಂದು ತಿಳಿಸಿದ್ದಾರೆ.