ಬೀದರ್: ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಮಾತ್ರವಲ್ಲ ಕೆಎಂಎಫ್ ಹಾಗೂ ಕೆಪಿಎಸ್ಸಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಬೀದರ್ ನಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೆಎಂಎಫ್ ಹುದ್ದೆಗಳನ್ನು 25 ಲಕ್ಷಕ್ಕೆ ಮಾರಾಟ ಮಾಡಲಾಗಿದೆ. ಕೆಪಿಎಸ್ಸಿ ನೇಮಕಾತಿಗೆ 1 ಕೋಟಿ ರೂಪಾಯಿ ತೆರಬೇಕಿದೆ. ಬಿಜೆಪಿ ಸರ್ಕಾರದಲ್ಲಿ ಕೆಲ ವ್ಯಕ್ತಿಗಳು ಗಂಟೆಗೆ ಕೋಟಿ ರೂಪಾಯಿ ಸಂಪಾದಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
BIG NEWS: ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್; 1% ತಪ್ಪಿದ್ದರೂ ನನಗೆ ಶಿಕ್ಷೆಯಾಗಲಿ ಎಂದ ಮಾಜಿ ಸಚಿವ ಈಶ್ವರಪ್ಪ
ಕೇವಲ ಪಿಎಸ್ಐ ನೇಮಕಾತಿಯಲ್ಲಿನ ಭ್ರಷ್ಟಾಚಾರ ಮಾತ್ರ ಬೆಳಕಿಗೆ ಬಂದಿದೆ. ಭ್ರಷ್ಟಾಚಾರದ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೆ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಬಡ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಇಂತಹ ಅಕ್ರಮ ಮುಂದುವರೆಯುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಹಾಗೂ ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು. ಎರಡೂ ರಾಷ್ಟ್ರೀಯ ಪಕ್ಷಗಳು ಭ್ರಷ್ಟಾಚಾರದಲ್ಲಿ ತೊಡಗಿವೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಶ್ರೀಲಂಕಾಗೆ ಬಂದ ಪರಿಸ್ಥಿತಿ ನಾಳೆ ಭಾರತಕ್ಕೂ ಬರುತ್ತೆ. ರಾಷ್ಟ್ರೀಯ ಪಕ್ಷಗಳನ್ನು ಬಿಟ್ಟು ಪ್ರಾದೇಶಿಕ ಪಕ್ಷಕ್ಕೆ ಮತ ನೀಡಿ ಎಂದು ಕುಮಾರಸ್ವಾಮಿ ಕರೆ ನೀಡಿದರು.