ಬೆಳಗಾವಿ: ಕೆಎಂಎಫ್ ನಲ್ಲಿ ಉದ್ಯೋಗವಕಾಶ ಸೃಷ್ಟಿಸಲಿದ್ದು, ಮಾರ್ಚ್ ನೊಳಗೆ 460 ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರ ಸಂಘದ ಹಾಲು ಶೀಥಲೀಕರಣ ಘಟಕ ಉದ್ಘಾಟಿಸಿ ಮಾತನಾಡಿ, ಉತ್ತರ ಕರ್ನಾಟಕದ ಪ್ರತಿಭಾನ್ವಿತ ಯುವಕರು, ಉದ್ಯೋಗದಿಂದ ವಂಚಿತರಾದವರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ಕೆಎಂಎಫ್ ನಿರ್ಧರಿಸಿದೆ. 460 ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ರೈತರಿಗಾಗಿಯೇ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಕಷ್ಟು ಯೋಜನೆ ಜಾರಿಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.