alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 487 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿರಿಯ ಉಪ ನಿರ್ದೇಶಕರು, ವೈದ್ಯಾಧಿಕಾರಿ, ಬಯೋ ಸೆಕ್ಯೂರಿಟಿ ಆಫೀಸರ್, ಸಹಾಯಕ ನಿರ್ದೇಶಕರು, ಅಧೀಕ್ಷಕರು, ಆಡಳಿತ ಸಹಾಯಕರು, ಲೆಕ್ಕ ಸಹಾಯಕರು, ಮಾರುಕಟ್ಟೆ ಸಹಾಯಕರು, ಕಿರಿಯ ತಾಂತ್ರಿಕರು, ಸ್ಟಾಫ್ ನರ್ಸ್, ಶೀಘ್ರ ಲಿಪಿಗಾರ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಕ್ಟೋಬರ್ 20 ರಿಂದ ನವೆಂಬರ್ 19 ರವರೆಗೆ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.kmfnandini.coop ವೆಬ್ಸೈಟ್ ಗಮನಿಸಬಹುದಾಗಿದೆ. ಈ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಖುದ್ದಾಗಿ, ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಲು ಯಾವುದೇ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...