ತುಮಕೂರು: ಡಿಸೆಂಬರ್ ಅಂತ್ಯದೊಳಗೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಪತ್ತಿನ ಸಹಕಾರ ಸಂಘ ಪ್ರಾರಂಭಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಚಿಕ್ಕನಾಯಕನಹಳ್ಳಿ ಕನ್ನಡ ಸಂಘದ ವೇದಿಕೆಯಲ್ಲಿ ತಾಲೂಕಿನ ಸಹಕಾರ ಸಂಘಗಳು ಮತ್ತು ಕೆ.ಎನ್. ರಾಜಣ್ಣ ಅಭಿಮಾನಿ ಬಳಗದಿಂದ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಹಕಾರಿ ಕ್ಷೇತ್ರ ಜನಪರ ಆಂದೋಲನ ಮಾಡುತ್ತಿದ್ದು, ಶಾಸಕ ಸ್ಥಾನಕ್ಕಿಂತ ಸಹಕಾರಿ ಸ್ಥಾನವೇ ಮುಖ್ಯವಾಗಿದೆ. ಡಿಸೆಂಬರ್ ಅಂತ್ಯದೊಳಗೆ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪತ್ತಿನ ಸಹಕಾರ ಸಂಘ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಗದಗಿನ ಎಸ್.ಎಸ್. ಪಾಟೀಲ್ ಅವರು 1904ರಲ್ಲಿ ಪ್ರಾರಂಭಿಸಿದ ಸಹಕಾರ ಕ್ಷೇತ್ರ ಶಕ್ತಿಯುತವಾಗಿದೆ. ರೈತರು ಕೃಷಿಯ ಜೊತೆಗೆ ಹೈನುಗಾರಿಕೆಯಂತಹ ಉಪಕಸುಬು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದ್ದಾರೆ.