ಮೈಸೂರು: ರೈತರ ಅನುಕೂಲಕ್ಕೆ ತಕ್ಕಂತೆ ಗೋ ಹತ್ಯೆ ನಿಷೇಧ ಕಾಯ್ದೆ ರೂಪಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರೈತರ ಅನುಕೂಲಕ್ಕೆ ತಕ್ಕಂತೆ ಕಾಯ್ದೆದೆ ರೂಪಿಸಬೇಕಿದ್ದು, ಮುಂದಿನ ದಿನಗಳಲ್ಲಿ ಎಲ್ಲರೊಂದಿಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನಾನು ಮಾಂಸ ತಿನ್ನುತ್ತೇನೆ. ನೀವು ಬೇಡ ಎಂದರೂ ನಿಲ್ಲಿಸಲ್ಲ. ಹಿಂದಿನಿಂದಲೂ ಏನು ನಡೆದುಕೊಂಡು ಬಂದಿದೆಯೋ ಅದು ಸರಿ ಇದೆ ಎಂದ ಅವರು, ಗೋ ಹತ್ಯೆ ಎನ್ನುವುದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಹಸು ಕಡಿಯಬೇಕು ಎಂದು ನಾನು ಹೇಳಲ್ಲ. ಕಡಿಯಬಾರದು ಎಂದೂ ಹೇಳುವುದಿಲ್ಲ. ಆದರೆ, ರೈತರ ಅನುಕೂಲಕ್ಕೆ ತಕ್ಕಂತೆ ಕಾಯ್ದೆ ರೂಪಿಸಬೇಕಿದ್ದು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.