ಮಂಗಳೂರು: ಅಲ್ಪಾವಧಿ ಮತ್ತು ಮಧ್ಯಮಾವಧಿ ಬೆಳೆ ಸಾಲಗಳನ್ನು ನೀಡಲು ಕ್ರಮ ವಹಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಾವಧಿ ಮಧ್ಯಮಾವಧಿ ಬೆಳೆ ಸಾಲವನ್ನು ಬೆಳೆಗಾರರ ಸಾಮರ್ಥ್ಯಕ್ಕೆ ಅನುಗುಣವಾಗಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸಾಲಕ್ಕೆ ಅರ್ಜಿ ಸಲ್ಲಿಸಿದ ಬೆಳೆಗಾರರ ಬೆಳೆ ವ್ಯಾಪ್ತಿ, ಸಾಲ ಮರುಪಾವತಿ ಗಮನದಲ್ಲಿರಿಸಿಕೊಂಡು ರಾಜ್ಯ ಸಮಿತಿ ತೀರ್ಮಾನ ಕೈಗೊಳ್ಳಲಿದ್ದು, ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಹಿಂದಿನ ಸರ್ಕಾರ ಜಾರಿಗೊಳಿಸಿದ ಸಾಲ ಮನ್ನಾ ಯೋಜನೆಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ 351 ಕೋಟಿ ರೂ. ಪಾವತಿಸಲು ಬಾಕಿ ಇದೆ. ಒಂದು ವಾರದಲ್ಲಿ ಬೆಂಗಳೂರಿನಲ್ಲಿ ಎಲ್ಲಾ ಡಿಸಿಸಿ ಬ್ಯಾಂಕ್ ಗಳ ಮುಖ್ಯಸ್ಥರು, ಅಧಿಕಾರಿಗಳ ಸಭೆ ನಡೆಸಿ ಬಾಕಿ ಮೊತ್ತ ಹಂತ ಹಂತವಾಗಿ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.