alex Certify ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಗೆ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಗೆ ಚಾಕು ಇರಿತ

ಬೆಂಗಳೂರಿನಲ್ಲಿ ಅಕ್ರಮ ಸಂಬಂಧ ಒಪ್ಪದ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಠದಹಳ್ಳಿಯಲ್ಲಿ ನಡೆದಿದೆ.

ಶೇಕ್ ಮೆಹಬೂಬ್ ಎಂಬಾತ ಮಹಿಳೆಗೆ ಚಾಕುವಿನಿಂದ ಇರಿದಿದ್ದಾನೆ. ಆರು ವರ್ಷದ ಹಿಂದೆ ಮಹಿಳೆಯ ಪತಿ ಮೃತಪಟ್ಟಿದ್ದರು. ಅವರು ಇಬ್ಬರು ಮಕ್ಕಳ ಜೊತೆಗೆ ಜೀವನ ನಡೆಸುತ್ತಿದ್ದಾರೆ. ಈ ನಡುವೆ ಮಹಿಳೆ ಆಟೋ ಚಾಲಕ ಶೇಕ್ ಮೆಹಬೂಬ್ ಸ್ನೇಹ ಬೆಳೆಸಿದ್ದಳು. ಆತನಿಗೂ ಮದುವೆಯಾಗಿ ಮಕ್ಕಳಿದ್ದಾರೆ.

ಹೀಗಾಗಿ ಶೇಕ್ ಮೆಹಬೂಬನಿಂದ ದೂರವಾಗಲು ಮಹಿಳೆ ನಿರ್ಧರಿಸಿದ್ದಳು. ಇದೇ ವಿಚಾರಕ್ಕೆ ನಿನ್ನೆ ರಾತ್ರಿ ಮೆಹಬೂಬ್ ಮತ್ತು ಮಹಿಳೆ ನಡುವೆ ಗಲಾಟೆಯಾಗಿದೆ. ಗಲಾಟೆಯ ವೇಳೆ ಮೆಹಬೂಬ್ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡ ಮಹಿಳೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...