ಬೆಂಗಳೂರು: ಇಬ್ಬರು ಜರಾಕ್ಸ್ ಅಂಗಡಿಯವರ ನಡುವೆ ಗಲಾಟೆ ನಡೆದು, ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸೋಮಶೇಖರ್ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ. ಶಶಿಕುಮಾರ್ ಎಂಬಾತ ಸೋಮಶೇಖರ್ ಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಸೋಮಶೇಖರ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.