alex Certify ‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸಿದವರಲ್ಲಿ ಅರ್ಹರೆಷ್ಟು ತಿಳಿಯಿರಿ |Yuvanidhi Scheme | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸಿದವರಲ್ಲಿ ಅರ್ಹರೆಷ್ಟು ತಿಳಿಯಿರಿ |Yuvanidhi Scheme

ಬೆಂಗಳೂರು : ರಾಜ್ಯ ಸರ್ಕಾರವು ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡಿದ್ದು, ಅರ್ಹ ಫಲಾನುಭವಿಗಳು ನೋಂದಣಿ ಮಾಡಿಕೊಂಡು ಭತ್ಯೆ ಪಡೆದುಕೊಳ್ಳುವಂತೆ ಸೂಚನೆ ನೀಡಿದೆ.

ರಾಜ್ಯ ಸರ್ಕಾರವು ಯುವನಿಧಿ ಯೋಜನೆಯಡಿ ಪದವೀದಧರರಿಗೆ ರೂ. 3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500/- ನಿರುದ್ಯೋಗ ಭತ್ಯೆಯನ್ನು 2 ವರ್ಷದವರೆಗೆ ನೀಡುತ್ತಿದೆ. ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬೇಕು.

ಯೋಜನೆಗೆ ಅರ್ಜಿ ಸಲ್ಲಿಸಿದವರಲ್ಲಿ ಅರ್ಹರೆಷ್ಟು..?

ಇದುವರೆಗೆ ಯುವನಿಧಿ ಯೋಜನೆಗೆ 85,000 ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ 85 ಸಾವಿರ ಜನರ ಪೈಕಿ ಕೇವಲ 3,000 ಅರ್ಜಿದಾರರು ಮಾತ್ರ ಇದುವರೆಗೆ ಸರ್ಕಾರ ನಿಗದಿಪಡಿಸಿದ ಅರ್ಹತಾ ಮಾನದಂಡವನ್ನು ಹೊಂದಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.

ಅರ್ಜಿ ಸಲ್ಲಿಕೆಗೆ ಅರ್ಹತೆಗಳು

1) 2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
2) ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು ಅರ್ಜಿ ಸಲ್ಲಿಸಬಹುದಾಗಿದೆ.
3) ಸ್ವಯಂ ಉದ್ಯೋಗ ಹೊಂದಿಲ್ಲದವರು
4) ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು
5) ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು)
6) ನೋಂದಣಿಗೆ ಅಗತ್ಯವಿರುವ ದಾಖಲಾತಿಗಳು- ಎಸ್.ಎಸ್.ಎಲ್.ಸಿ. ಪಿಯುಸಿ, ಪದವಿ/ ಡಿಪ್ಲೋಮಾ ಪ್ರಮಾಣ ಪತ್ರ ಅಗತ್ಯವಾಗಿದೆ.
7) ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಬಹುದು. ಯುವನಿಧಿಗೆ ಅರ್ಜಿ ಸಲ್ಲಿಸಲು ಬಯಸುವವರು ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಅಥವಾ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಡಿಪ್ಲೋಮಾ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಅಭ್ಯರ್ಥಿಯ ಬ್ಯಾಂಕ್ ಪಾಸ್ ಪುಸ್ತಕವನ್ನು ಹೊಂದಿರಬೇಕು. ನೇರ ನಗದು ವರ್ಗಾವಣೆ (Direct Transfer) ಸ್ವೀಕರಿಸಲು ಆಧಾರ್ ಸಂಖ್ಯೆಯೊಂದಿಗೆ (Aadhar-seeded) ಬ್ಯಾಂಕ್ ಖಾತೆಯನ್ನು ನೀವು ಹೊಂದಿರಬೇಕು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...