ಮಹಾ ಶಿವರಾತ್ರಿ ಹಬ್ಬವನ್ನು ಮಾರ್ಚ್ ನಲ್ಲಿ ನಡೆಸಲಾಗುತ್ತದೆ. ಈ ವರ್ಷ ಮಹಾ ಶಿವರಾತ್ರಿಯನ್ನು ಮಾರ್ಚ್ 8, 2024 ರಂದು ಆಚರಿಸಲಾಗುತ್ತದೆ. ಚತುರ್ದಶಿ ತಿಥಿಯಂದು ಮಾರ್ಚ್ 8 ರ ಸಂಜೆಯಿಂದ ಮಾರ್ಚ್ 9 ರ ಸಂಜೆಯವರೆಗೆ ಮಹಾ ಶಿವರಾತ್ರಿಯನ್ನು ಆಚರಿಸಲಾಗುವುದು ಎಂದು ಪಂಚಾಂಗ ಹೇಳುತ್ತದೆ.
ಫಾಲ್ಗುಣ ಮಾಸದ ಕ್ಷೀಣಿಸುವ ಹಂತದ ಹದಿನಾಲ್ಕನೇ ದಿನದ ಆರಂಭದಲ್ಲಿ, ಮಹಾ ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಶಿವನ ಭಕ್ತರು ಈ ರಜಾದಿನವನ್ನು ಆಚರಿಸುತ್ತಾರೆ, ಮತ್ತು ಅವರು ಪ್ರತಿವರ್ಷ ಬರುವ ಮಹಾ ಶಿವರಾತ್ರಿಯನ್ನು ಎದುರು ನೋಡುತ್ತಾರೆ.ಈ ದಿನದಂದು ಭಕ್ತರು ಶಿವ ಪೂಜೆಯನ್ನು ಆಚರಿಸುತ್ತಾರೆ ಮತ್ತು ಮುಂಜಾನೆಯಿಂದ ರಾತ್ರಿಯವರೆಗೆ ಜಾಗರಣೆ ಮತ್ತು ಆಚರಣೆಗಳಲ್ಲಿ ಭಾಗವಹಿಸುತ್ತಾರೆ.ದಿನವನ್ನು ಭಾರತದಾದ್ಯಂತ ದೇವಾಲಯ ಭೇಟಿಗಳು, ಪ್ರಕ್ರಿಯೆಗಳು ಮತ್ತು ಇತರ ಆಚರಣೆಗಳು ಮತ್ತು ಸಂಪ್ರದಾಯಗಳೊಂದಿಗೆ ಲಕ್ಷಾಂತರ ಭಕ್ತರು ಆಚರಿಸುತ್ತಾರೆ.
ಶಿವರಾತ್ರಿ ಹಬ್ಬದ ಮುಹೂರ್ತ
ಈ ವರ್ಷದ ಶಿವರಾತ್ರಿಯು ಶುಕ್ರವಾರ ಮಾರ್ಚ್ 8ರಂದು ಬಂದಿದೆ. ಮಾರ್ಚ್ 8ರಿಂದ ರಾತ್ರಿ 8:13ರವರೆಗೆ ತ್ರಯೋದಶಿ ಇರಲಿದೆ. ಅಂದಿನಿಂದ ಚತುರ್ದಶಿ ಆರಂಭಗೊಳ್ಳಲಿದೆ. ಚತುರ್ದಶಿ ತಿಥಿಯು ಮಾರ್ಚ್ 9ರ ಸಂಜೆ 6:17ಕ್ಕೆ ಕೊನೆಗೊಳ್ಳುತ್ತದೆ.
ಮಹಾ ಶಿವರಾತ್ರಿ ದಿನಾಂಕ : March 8, 2024
ಮಹಾ ಶಿವರಾತ್ರಿ ದಿನ : ಶುಕ್ರವಾರ
ಚತುರ್ದಶಿ ತಿಥಿ ಆರಂಭ : 21:57 ರಂದು ಮಾರ್ಚ್ 08, 2024
ಚತುರ್ದಶಿ ತಿಥಿ ಕೊನೆ : 18:17 ಮಾರ್ಚ್ 09, 2024 ರಂದು
ನಿಶಿತಾ ಕಾಲ ಪೂಜಾ ಸಮಯ : 00:07 ರಿಂದ 00:56, ಮಾರ್ಚ್ 09
ರಾತ್ರಿಯ ಮೊದಲ ಪ್ರಹಾರ್ ಪೂಜಾ ಸಮಯ : 18:25 ರಿಂದ 21:28
ರಾತ್ರಿ ಎರಡನೇ ಪ್ರಹಾರ್ ಪೂಜಾ ಸಮಯ : 21:28 ರಿಂದ 00:31, ಮಾರ್ಚ್ 09
ರಾತ್ರಿ ಮೂರನೇ ಪ್ರಹಾರ್ ಪೂಜಾ ಸಮಯ : 00:31 ರಿಂದ 03:34, ಮಾರ್ಚ್ 09
ರಾತ್ರಿ ನಾಲ್ಕನೇ ಪ್ರಹಾರ್ ಪೂಜಾ ಸಮಯ : 03:34 ರಿಂದ 06:37, ಮಾರ್ಚ್ 09
ಶಿವರಾತ್ರಿ ಪಾರಣ ಸಮಯ : 06:37 ರಿಂದ 15:29
ಶಿವರಾತ್ರಿಯ ಮಹಿಮೆ
ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ. ಶಿವ ರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ. ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ.
ಹಾಗಾಗಿ, ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ. ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಲಿಂಗಪುರಾಣದ ಪ್ರಕಾರ, ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ ದಿನವಿದು. ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.
ಶಿವರಾತ್ರಿ ಆಚರಣೆ ಹಿನ್ನೆಲೆ
ಪ್ರತಿ ಸಂವತ್ಸರದಲ್ಲಿ.. ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು… ರಾತ್ರಿ ಸಮಯದಲ್ಲಿ ಶಿವ ಪಾರ್ವತಿ ಜೊತೆಯಲ್ಲಿ ಭೂಮಿಗೆ ಬರುತ್ತಾನೆ.. ಭೂಮಿಯಲ್ಲಿ ಸಂಚರಿಸುತ್ತ ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣ ಗೊಳ್ಳುತ್ತಾನೆ.. ಆ ಸಮಯದಲ್ಲಿ ಅಂದ್ರೆ ಶಿವರಾತ್ರಿ ರಾತ್ರಿ ವೇಳೆಯಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಯೂ ಇದೆ.
ಸ್ಕಂದ ಪುರಾಣ ದಲ್ಲಿ ಶಿವರಾತ್ರಿ ಹಬ್ಬದ ಬಗ್ಗೆ ಉಲ್ಲೇಖವಿದೆ.. ಶಿವರಾತ್ರಿಯು ಸಮಯ ಪೂಜೆಗೆ ಬಹು ಪ್ರಾಶಸ್ತ್ಯವಾದ ಸಮಯ… ಆ ದಿನ ರಾತ್ರಿಯಲ್ಲಿ ಮೋಡಗಳಿಲ್ಲದ ಶುಭ್ರ ಆಕಾಶ, ಮಂಗಳಕರ ನಾದ ಶುಭ್ರ ಚಂದ್ರ ಸ್ಪೂರ್ತಿ ಹುಟ್ಟಿಸುವ ಸಂವೇದನಾಶೀಲ ವಾತಾವರಣವನ್ನು ಕಾಣಬಹುದು.. ಈ ಪರ್ವಕಾಲವು ಪೂಜೆಗೆ ಪ್ರಶಸ್ತವಾದ ಕಾಲವಾಗಿದ್ದು ಶಿವನ ಆರಾಧನೆ ಮಾಡಿದರೆ ಪಾಪ ಕರ್ಮಗಳನ್ನು ಕಳೆಯುತ್ತಾನೆ ಎಂಬ ಪ್ರತೀತಿ ಇದೆ.
ತ್ರಯೋದಶಿಯು ಶಕ್ತಿರೂಪವಾದರೆ,, ಚತುರ್ದಶಿಯು ಶಿವರೂಪ. ತ್ರಯೋದಶಿಯು ಚತುರ್ದಶಿಯಲ್ಲಿ ಅಂತರ್ಗತ ವಾಗಿದ್ದರೆ ಅದು ಶಿವಶಕ್ತಿಯೋಗ ವಾಗುತ್ತದೆ. ಅದೆ ಶಿವರಾತ್ರಿಯ ಸಮಯವೆಂದು ಉಕ್ತಿಯೊಂದರಲ್ಲಿ ಉಲ್ಲೇಖವಿದೆ. ಈ ಶುಭ ಪುಣ್ಯದಿನದಂದು ಬ್ರಹ್ಮ ವಿಷ್ಣು ಆದಿಯಾಗಿ ಶಿವನನ್ನು ಪೂಜಿಸಿದ್ದು ಶಿವನೆ ತನಗೆ ಶಿವರಾತ್ರಿ ಪ್ರಿಯವಾದ ದಿನವೆಂದು ಹೇಳಿರುವನೆಂದು ಪ್ರತೀತಿ ಇದೆ.
‘ಶಿವ ಪುರಾಣ ‘ ದಲ್ಲಿ ಬರುವ ಬೇಡರ ಕಣ್ಣಪ್ಪನ ಕಥೆ….., ‘ ಸ್ಕಂದ ಪುರಾಣ ‘ದ ಬೇಡ ಚಂದನನ ಕಥೆ…, ‘ ಗರುಡ ಮತ್ತು ಅಗ್ನಿ ಪುರಾಣ ‘ ಗಳ ಬೇಡ ಸುಂದರ ಸೇನನ ಕಥೆ… ಈ ಎಲ್ಲ ಕಥೆಗಳಲ್ಲೂ ಒಂದು ವಿಶೆಷವಾದ ಸಾಮ್ಯತೆಯನ್ನು ಕಾಣಬಹುದು.. ಮಹಾ ಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ ಬಿಲ್ವ ಪತ್ರೆಗಳನ್ನು ಅರ್ಪಿಸಿದ್ದರಿಂದ ಅವರೆಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು. ಇದು ಶಿವರಾತ್ರಿ ಪೂಜೆಯ ಫಲದ ಮಹಿಮೆಯನ್ನು ಎತ್ತಿ ತೋರಿಸುತ್ತದೆ.
ಮಹಾಶಿವರಾತ್ರಿಯ ಉಪವಾಸ ಮತ್ತು ಜಾಗರಣೆಯ ಮಹತ್ವ
* ಶಿವನನ್ನು ಪೂಜಿಸುವುದರಿಂದ ಕರುಣಾಮಯಿಯಾದ ಶಿವನು ಸರ್ವರನ್ನು ಅನುಗ್ರಹಿಸುತ್ತಾನೆ ಎಂಬ ಪ್ರತೀತಿ ಇದೆ.. ಬೇಡರ ಕಣ್ಣಪ್ಪನು ಶಿವನನ್ನು ಪೂಜಿಸಿದ್ದರಿಂದ ಅವನನ್ನು ನುಗ್ರಹಿಸಿ ಮುಕ್ತಿ ಮಾರ್ಗ ತೋರಿಸಿದನು.. ‘ ಸ್ಕಂದ ಪುರಾಣ ‘ದ ಪ್ರಕಾರ ಬೇಡ ಚಂದನನಿಗೂ ಶಿವನು ಅನುಗ್ರ ನೀಡಿದ್ದಾನೆ… ‘ ಗರುಡ ಮತ್ತು ಅಗ್ನಿ ಪುರಾಣ ‘ ಗಳಲ್ಲಿ ಉಲ್ಲೇಖವಿರುವಂತೆ, ಬೇಡ ಸುಂದರ ಸೇನನಿಗೂ ಶಿವನು ಆಶೀರ್ವಾದಿಸಿದ್ದಾನೆ.. ಹೀಗಾಗಿ ಮಹಾ ಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ, ಬಿಲ್ವ ಪತ್ರೆಗಳನ್ನು ಅರ್ಪಿಸುವುದರಿಂದ ಎಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು.
* ಪ್ರತಿ ವರ್ಷದ ಶಿವರಾತ್ರಿಯ ಸಮಯದಲ್ಲಿ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ.. ಭೂ-ಸಂಚಾರ ಮಾಡುತ್ತಾನೆ.. ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ.. ಹೀಗಾಗಿ ಶಿವರಾತ್ರಿಯ ಶಿವನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.
* ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.
* ಕರುಣಾಮಯಿಯಾದ ಶಿವನನ್ನು ಭಕ್ತಿ ಪೂರಕವಾಗಿ ಯಾರೇ ಪೂಜಿಸಿದರೂ ಅವರನ್ನು ಅನುಗ್ರಹಿಸುತ್ತಾನೆ.. ಹಿಂದು ಮುಂದು ನೋಡದೇ ಅವರಿಗೆ ಬೇಡಿದ ವರಗಳನ್ನು ನೀಡುತ್ತಾನೆ.. ಭಕ್ತಿಗೆ ಮರುಳಾಗುವ ಶಿವನು ಹೀಗೆ ತನ್ನ ಭಕ್ತರಿಗೆ ಬೇಡಿದ ವರವನ್ನು ನೀಡುವುದರ ಮೂಲಕ ಎಷ್ಟೋ ಸಲ ಸಂಕಟಕ್ಕೆ ಸಿಲುಕಿದ್ದೂ ಇದೆ.. ಆದರೆ ಎಂಥದ್ದೇ ಸಂಕಟವಿದ್ದರೂ ಶಿವನು ಭಕ್ತರನ್ನು ಸದಾ ಅನುಗ್ರಹಿಸುತ್ತಲೇ ಇರುತ್ತಾನೆ.. ಅದಕ್ಕೆ “ಶಿವ ಭಕ್ತನಿಗೆ ನರಕಾ ಇಲ್ಲ” ಅನ್ನೋ ಮಾತಿದೆ.