ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ “ತುರ್ತು ಲ್ಯಾಂಡಿಂಗ್” ಮಾಡಿದೆ.
ಬೆಂಗಳೂರು ವಿಮಾನ ನಿಲ್ದಾಣದ ವಕ್ತಾರರ ಹೇಳಿಕೆಯ ಪ್ರಕಾರ, ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು.
ಐಎಕ್ಸ್ 1132 ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 11.12 ಕ್ಕೆ ಇಳಿಯಿತು, ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಒಳಗಿನ ಸಿಬ್ಬಂದಿ ಬಲ ಇಂಜಿನ್ನಲ್ಲಿ ಬೆಂಕಿಯನ್ನು ಗಮನಿಸಿ ಏರ್ ಟ್ರಾಫಿಕ್ ಕಂಟ್ರೋಲರ್(ಎಟಿಸಿ) ಗೆ ವರದಿ ಮಾಡಿದರು.
“ಪೂರ್ಣ-ಪ್ರಮಾಣದ” ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಮತ್ತು ಇಳಿದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎಂದು ಹೇಳಲಾಗಿದೆ.
ಟೇಕಾಫ್ ಆದ ನಂತರ ಬಲ ಇಂಜಿನ್ನಿಂದ ಬೆಂಕಿ ಹೊತ್ತಿಕೊಂಡ ಶಂಕೆಯಿಂದಾಗಿ, ಬೆಂಗಳೂರು-ಕೊಚ್ಚಿ ವಿಮಾನವು ಹಿಂತಿರುಗಲು ನಿರ್ಧರಿಸಿತು. ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಿತು. ಕಾರಣ ತಿಳಿಯಲು ಸಂಪೂರ್ಣ ತನಿಖೆ ನಡೆಸಲಾಗಿದೆ ಎಂದು ಏರ್ಲೈನ್ ಹೇಳಿಕೆಯಲ್ಲಿ ತಿಳಿಸಿದೆ.