ಕೊಚ್ಚಿ: ಕೇರಳದಲ್ಲಿ ಸೈಕಲ್ ಬಳಕೆದಾರರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮೆಟ್ರೋದಲ್ಲಿ ಉಚಿತವಾಗಿ ಸೈಕಲ್ ಸಾಗಿಸಲು ಅವಕಾಶ ಕಲ್ಪಿಸಲಾಗಿದೆ. ಆರಂಭಿಕ ಹಂತದಲ್ಲಿ 6 ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಅನುಮತಿ ನೀಡಲಾಗಿದೆ.
ಸೈಕಲ್ ಬಳಕೆದಾರರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸೈಕಲ್ ಸಾಗಿಸಲು ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೊಚ್ಚಿ ಮೆಟ್ರೋದ 6 ನಿಲ್ದಾಣದಲ್ಲಿ ಪ್ರಯಾಣಿಕರು ಉಚಿತವಾಗಿ ಸೈಕಲ್ ಸಾಗಿಸಬಹುದು.
ಕೊಚ್ಚಿಯಲ್ಲಿ ಹೆಚ್ಚಿನ ಸಂಖ್ಯೆಯ ಜನ ಸೈಕಲ್ ಬಳಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಶುಲ್ಕವಿಲ್ಲದೆ ಸೈಕಲ್ ಗಳನ್ನು ಸಾಗಿಸಬಹುದು. ಪ್ರಯಾಣಿಕರ ಸಂಖ್ಯೆ ಮತ್ತು ಬೇಡಿಕೆ ಆಧಾರದ ಮೇಲೆ ಇನ್ನಷ್ಟು ನಿಲ್ದಾಣಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಕೋಚಿ ಮೆಟ್ರೋ ರೈಲು ಸೇವೆಯ ವ್ಯವಸ್ಥಾಪಕ ನಿರ್ದೇಶಕ ಅಲ್ಕೇಶ್ ಕುಮಾರ್ ತಿಳಿಸಿದ್ದಾರೆ. ಸೈಕ್ಲಿಸ್ಟ್ ಗಳು ನಿಲ್ದಾಣದಲ್ಲಿ ಎಲಿವೇಟರ್ ಗಳನ್ನು ಬಳಸಬಹುದು ರೈಲಿನ ಎರಡು ಬದಿಯಲ್ಲಿ ತಮ್ಮ ಸೈಕಲ್ ಇಡಬಹುದು ಎಂದು ಮಾಹಿತಿ ನೀಡಿದ್ದಾರೆ.