
ಕೊಡಗು: 24 ವರ್ಷದ ಯುವತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೊಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನಡೆದಿದೆ.
ನಿಲಿಕ ಪೊನ್ನಪ್ಪ ಮೃತ ದುರ್ದೈವಿ. ಬೆಳಿಗ್ಗೆ ಎಂದಿನಂತೆ ಕೆಲಸಕ್ಕೆ ಹೋಗಲೆಂದು ತಯಾರಾಗುತ್ತಿದ್ದ ಯುವತಿ ಮನೆಯಲ್ಲಿಯೇ ಏಕಾಏಕಿ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಗಳ ಸಾವಿನಿಂದ ಕಂಗೆಟ್ಟಿರುವ ಪೋಷಕರು ಕಂಗಾಲಾಗಿದ್ದಾರೆ. ಆರೋಗ್ಯವಾಗಿಯೇ ಇದ್ದ ಯುವತಿ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಆಘಾತ ತಂದಿದೆ.