
ಕೊಡಗು: ಕೊಡಗು ಜಿಲ್ಲೆಯಲ್ಲಿ ಅಪ್ರಾಪ್ತ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾಗಿದ್ದು, ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಕಳೆದ 9 ತಿಂಗಳಲ್ಲಿ ಜಿಲ್ಲೆಯಲ್ಲಿ 59 ಪೋಕ್ಸೋ ಪ್ರಕರಣಗಳು ದಾಖಲಾಗಿವೆ.
9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿಯರಾಗಿರುವುದು ಪತ್ತೆಯಾಗಿದೆ. 30 ಅಪ್ರಾಪ್ತೆಯರ ಪೈಕಿ ಈಗಾಗಲೇ 14 ಬಾಲಕಿಯರಿಗೆ ಹೆರಿಗೆಯಾಗಿದೆ. ಓರ್ವ ಅಪ್ರಾಪ್ತ ಬಾಲಕಿಗೆ ಗರ್ಭಪಾತವಾಗಿದೆ.
ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಹೆಚ್ಚು ಅಪ್ರಾಪ್ತೆಯರು ಗರ್ಭಿಣಿಯರಾಗಿರುವ ಪ್ರಕರಣ ಪತ್ತೆಯಾಗಿದೆ. ಪರಿಶಿಷ್ಟ ಜಾತಿ, ಪರಿಷಿಷ್ಟ ಪಂಗಡದಲ್ಲೇ 43 ಸಂತ್ರಸ್ತೆಯರು ಪತ್ತೆಯಾಗಿದ್ದು, 43 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ತೋಟದ ಮನೆಗಳಲ್ಲೇ ಬಾಲಕಿಯರ ಮೇಲೆ ಅತಿ ಹೆಚ್ಚು ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ತಿಳಿದುಬಂದಿದೆ.
ಇನ್ನು ಕೊಡಗು ಜಿಲ್ಲೆಯಲ್ಲಿ 5 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ. ಅಪ್ರಾಪ್ತೆಯರ ಗರ್ಭಿಣಿ ಪ್ರಕರಣ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದು, ಇಂತಹ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.