ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 32 ಹುದ್ದೆಗಳು ಖಾಲಿ ಇದ್ದು, 2025 ಜನವರಿ 16ರೊಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಮಾನ್ಯತೆ ಪಡೆದ ವಿವಿಯಿಂದ ಶೇಕಡ 55 ರಷ್ಟು ಕನಿಷ್ಠ ಅಂಕಗಳೊಂದಿಗೆ ವಾಣಿಜ್ಯೇತರ ಪದವಿ ಅಥವಾ ಶೇಕಡ 50ರಷ್ಟು ಕನಿಷ್ಠ ಅಂಕಗಳೊಂದಿಗೆ ವಾಣಿಜ್ಯ ಪದವಿ, ಡಿಪ್ಲೋಮೋ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಮತ್ತು ಸ್ನಾತಕೋತ್ತರ ಪದವಿ ಪಡೆದಿರಬೇಕು. ಕನಿಷ್ಠ ಆರು ತಿಂಗಳ ಡಿಪ್ಲೋಮೋ ಇನ್ ಕಂಪ್ಯೂಟರ್ ಆಪರೇಷನ್ ಸರ್ಟಿಫಿಕೇಟ್ ಕೋರ್ಸ್ ಕಡ್ಡಾಯವಾಗಿ ಮಾಡಿರಬೇಕು.
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಳಿಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ ದಾಟಿರಬಾರದು.
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1750 ರೂ. ಶುಲ್ಕವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಮಹಿಳೆಯರು, ವಿಕಲಚೇತನ ಅಭ್ಯರ್ಥಿಗಳಿಗೆ 1250 ರೂ. ಶುಲ್ಕವಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.