
ಮಡಿಕೇರಿ: ಊಟ ಸೇವಿಸಿದ ಬಳಿಕ ಕೊಡಗು ಜಿಲ್ಲಾ ಪಂಚಾಯತಿ ಸಿಇಒ ದಂಪತಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಿಗೆ ಕೊಡಗು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ.
ಪ್ರಾಣಪಾಯದಿಂದ ಸಿಇಒ ಆಕಾಶ್ ಮತ್ತು ಅವರ ಪತ್ನಿ ಪಾರಾಗಿದ್ದಾರೆ. ಆಸ್ಪತ್ರೆಗೆ ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಮತ್ತು ಪೊಲೀಸ್ ಅಧೀಕ್ಷಕ ಅಯ್ಯಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಬಳಿಕ ವಿಐಪಿ ಘಟಕಕ್ಕೆ ದಂಪತಿಯನ್ನು ಸ್ಥಳಾಂತರಿಸಲಾಗಿದೆ. ವಾರ್ಡ್ ಗೆ ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.