alex Certify ಕೊಡಗು : ಜ.26 ರಿಂದ 28 ರವರೆಗೆ ಫಲಪುಷ್ಪ ಪ್ರದರ್ಶನ |Flower Show | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಗು : ಜ.26 ರಿಂದ 28 ರವರೆಗೆ ಫಲಪುಷ್ಪ ಪ್ರದರ್ಶನ |Flower Show

ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜನವರಿ, 26 ರಿಂದ 28 ರವರೆಗೆ ನಗರದ ರಾಜಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ.

ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜನವರಿ, 26 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ|| ಶಾಮ್ಲಾ ಇಕ್ಬಾಲ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಇತರರು ಪಾಲ್ಗೊಳ್ಳಲಿದ್ದಾರೆ  ಎಂದು ಪ್ರಕಟಣೆ ಹೊರಡಿಸಿದೆ.

ಸಾಂದರ್ಭಿಕ ಚಿತ್ರ

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...