
ಮಡಿಕೇರಿ: ರಾಜ್ಯದ ಹಲವೆಡೆ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದ್ದು, ತ್ರಿವೇಣಿ ಸಂಗಮ ಸಂಪೂರ್ಣ ಮುಳುಗಡೆಯಾಗಿದೆ.
ಭಾರಿ ಮಳೆಗೆ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮೆಟ್ಟುಲುಗಳವರೆಗೂ ನೀರು ನಿಂತಿದ್ದು, ದೇವಾಲಯದ ಸುತ್ತ ಜಲಾವೃತಗೊಂಡಿದೆ.
ನಾಪೊಕ್ಲು ಹಾಗೂ ಮಡಿಕೇರಿ ರಸ್ತೆ ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ರಸ್ತೆ ಸಂಚಾರ ಬಂದ್ ಆಗಿದೆ. ಹಲವೆಡೆ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯಾದ್ಯಂತ ಬಿರುಗಾಳಿ, ಮಳೆಯಿಂದಾಗಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವೆಡೆ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ.