ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಲಾಕ್ಡೌನ್ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ವಾರದಲ್ಲಿ ಮೂರು ದಿನಗಳ ಕಾಲ ಅಗತ್ಯವಸ್ತುಗಳ ಅವಕಾಶ ನೀಡಲಾಗಿದೆ.
ಸೋಮವಾರ, ಬುಧವಾರ, ಶುಕ್ರವಾರ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕು ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ. ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರದಂತೆ ನಿರ್ಬಂಧ ಹೇರಲಾಗಿದೆ.