alex Certify ಗುಡ್ ನ್ಯೂಸ್: ಪೊಲೀಸ್, ಮಹಿಳಾ ಪೊಲೀಸ್, ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ; ಅಂತಿಮ ಆಯ್ಕೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಪೊಲೀಸ್, ಮಹಿಳಾ ಪೊಲೀಸ್, ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ; ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಪೊಲೀಸ್, ಮಹಿಳಾ ಪೊಲೀಸ್, ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ; ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ 2019 ನೇ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್, ಮಹಿಳಾ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗೆ ಹಾಜರಾಗಿ 1:5 ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಈಗಾಗಲೇ ದೇಹದಾಢ್ರ್ಯತೆ ಮತ್ತು ಸಹಿಷ್ಟುತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ಅರ್ಹಗೊಂಡ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಲು ಕೊಡಗು ಜಿಲ್ಲಾ ಪೊಲೀಸ್ ನೇಮಕಾತಿ ಸಮಿತಿ ಸದಸ್ಯರನ್ನೊಳಗೊಂಡ ಸಭೆಯು ನಡೆದಿದ್ದು, 2019 ನೇ ಸಾಲಿನ ಸಿವಿಲ್ ಪೊಲೀಸ್ ಕಾನ್ಸಟೇಬಲ್ -62 ಹುದ್ದೆಗಳು, ಮಹಿಳಾ ಪೊಲೀಸ್ ಕಾನ್ಸಟೇಬಲ್–16 ಹುದ್ದೆಗಳು ಮತ್ತು ಸಶಸ್ತ್ರ ಪೊಲೀಸ್ ಕಾನ್ಸಟೇಬಲ್-53 ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪೊಲೀಸ್ ನೇಮಕಾತಿ  ಸಮಿತಿಯ ಅಧ್ಯಕ್ಷರು ಮತ್ತು ಪೊಲೀಸ್ ಅಧೀಕ್ಷಕರಾದ ಕ್ಷಮಾ ಮಿಶ್ರಾ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...