ಕೊಡಗು: ನಿಂತಿದ್ದ ಕಾರಿನಲ್ಲಿ ವೈದ್ಯನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿದೆ.
ವೈದ್ಯ ಸತೀಶ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿಂತಿದ್ದ ಕಾರಿನಲ್ಲಿ ಕುಳಿತಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಶಿವಳ್ಳಿಯ ನಿವಾಸಿಯಾಗಿರುವ ವೈದ್ಯ ಸತೀಶ್, ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆನೆಕಾಡು ಗ್ರಾಮದಲ್ಲಿ ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಇನ್ನೊಂದು ಮಾಹಿತಿ ಪ್ರಕಾರ ಭ್ರೂಣ ಹತ್ಯೆ ಕೇಸ್ ನಲ್ಲಿ ವೈದ್ಯ ಸತೀಶ್ ಹೆಸರು ಕೂಡ ಕೇಳಿಬಂದಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ನಾಪತ್ತೆಯಾಗಿದ್ದ. ಭ್ರೂಣ ಹತ್ಯೆ ಪ್ರಕರಣ ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯೂ ವ್ಯಕ್ತವಾಗಿದೆ.