alex Certify ದೆಹಲಿಯ ಭೀಕರ ವಾಯುಮಾಲಿನ್ಯಕ್ಕೆ ಕೊಡಗಿನ ‘ಕಾಫಿ ಉದ್ಯಮಿ’ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಯ ಭೀಕರ ವಾಯುಮಾಲಿನ್ಯಕ್ಕೆ ಕೊಡಗಿನ ‘ಕಾಫಿ ಉದ್ಯಮಿ’ ಬಲಿ

ಕೊಡಗು : ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರ ಹದಗೆಟ್ಟಿದ್ದು, ಭೀಕರ ವಾಯುಮಾಲಿನ್ಯಕ್ಕೆ ಕೊಡಗಿನ ‘ಕಾಫಿ ಉದ್ಯಮಿ’ ಬಲಿಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಕುಶಾಲನಗರದ ನರೇಂದ್ರ ಹೆಬ್ಬಾರ್ (56) ಎಂದು ಗುರುತಿಸಲಾಗಿದೆ.

ಇವರು ಕಾಫಿ ಉದ್ಯಮಿಯಾಗಿದ್ದು, ದೆಹಲಿಯಲ್ಲಿ ನಡೆದ 4 ದಿನಗಳ ಕಾಫಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಭೀಕರ ವಾಯುಮಾಲಿನ್ಯಕ್ಕೆ ತುತ್ತಾದ ಇವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಮಾರನೇ ದಿನ ಬೆಂಗಳೂರಿಗೆ ಹಿಂತಿರುಗಿದ್ದರು.

ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...