alex Certify ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಭಾರಿ ಮಳೆ ಬಗ್ಗೆ ಮಾಹಿತಿ: ಅಮಾವಾಸ್ಯೆ ಬಳಿಕ ವಿಪರೀತ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಭಾರಿ ಮಳೆ ಬಗ್ಗೆ ಮಾಹಿತಿ: ಅಮಾವಾಸ್ಯೆ ಬಳಿಕ ವಿಪರೀತ ಮಳೆ ಸಾಧ್ಯತೆ

ದಾವಣಗೆರೆ: ಅಮಾವಾಸ್ಯೆ ಕಳೆದ ನಂತರ ವಿಪರೀತ ಮಳೆಯಾಗುವ ಸಂಭವವಿದೆ ಎಂದು ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹೊನ್ನಾಳಿಯಲ್ಲಿ ಮಾತನಾಡಿದ ಸ್ವಾಮೀಜಿ, ಅಮಾವಾಸ್ಯೆ ನಂತರ ರಾಜ್ಯದಲ್ಲಿ ವಿಪರೀತ ಮಳೆಯಾಗುವ ಸಂಭವ ಇದೆ. ಮಳೆಗೂ, ಅನ್ನಕ್ಕೂ ತೊಂದರೆ ಇಲ್ಲ. ಆದರೆ, ಪ್ರಕೃತಿಯಿಂದ ಹೆಚ್ಚಿನ ಹಾನಿಯಾಗುವ ಲಕ್ಷಣಗಳಿವೆ ಎಂದು ತಿಳಿಸಿದ್ದಾರೆ.

ರಾಜ್ಯ ಹಾಗೂ ರಾಷ್ಟ್ರದಲ್ಲಿ ಗಂಡಾಂತರ ಕಾಡಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದೆ. ಅಂತೆಯೇ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಹೆಚ್ಚಾದರೂ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...