ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ರೈತ ವಿರೋಧಿ ಕಾಯ್ದೆ ವಾಪಸ್ ಆಗುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕೃಷಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತೀಯ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27 ರಂದು ಭಾರತ ಬಂದ್ ಗೆ ಕರೆ ನೀಡಿದೆ. ಇದನ್ನು ಬೆಂಬಲಿಸಿ ರಾಜ್ಯದಲ್ಲಿ ರೈತ ಸಂಘಟನೆಗಳು ಕರ್ನಾಟಕ ಬಂದ್ ಮಾಡಬೇಕೆಂದು ಅವರು ಹೇಳಿದ್ದಾರೆ.
ಸೆಪ್ಟಂಬರ್ 27 ರಂದು ರಾಜ್ಯದಲ್ಲಿ ಸಂಪೂರ್ಣ ಬಂದ್ ಆಚರಿಸಬೇಕು. ಎಲ್ಲ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಅಂಗಡಿ ಮುಂಗಟ್ಟು ಬಂದ್ ಆಗಬೇಕೆಂದು ಅವರು ಹೇಳಿದ್ದು, ಬಂದ್ ಯಶಸ್ಸಿಗಾಗಿ ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬೆಂಬಲ ಕೋರಲಾಗುವುದು ಎಂದು ತಿಳಿಸಿದ್ದಾರೆ.