alex Certify ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಿಂದಲೂ ಕಿಂಗ್ ಕೊಹ್ಲಿ ಔಟ್ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಿಂದಲೂ ಕಿಂಗ್ ಕೊಹ್ಲಿ ಔಟ್ ?

ಭಾರತೀಯ ಕ್ರಿಕೆಟ್ ಅಭಿಮಾನಿಗಳು ತಮ್ಮ ಬ್ಯಾಟಿಂಗ್ ಹೀರೋ ವಿರಾಟ್ ಕೊಹ್ಲಿಯನ್ನು ಮತ್ತೆ ಮೈದಾನಕ್ಕೆ ನೋಡಲು ಸ್ವಲ್ಪ ಸಮಯ ಕಾಯಬೇಕಾಗಬಹುದು. ಫೆಬ್ರವರಿ 15 ರಿಂದ ರಾಜ್ ಕೋಟ್ ನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಭಾರತದ ಬ್ಯಾಟಿಂಗ್ ದಿಗ್ಗಜ ಹೊರಗುಳಿಯುವ ಸಾಧ್ಯತೆಯಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯದಿಂದ ಕೊಹ್ಲಿ ಹೊರಗುಳಿಯುವ ಸಾಧ್ಯತೆಯಿದೆ. ಎಎನ್ಐ ಮೂಲಗಳ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆದಾರರಿಗೆ ವಿರಾಟ್ ಕೊಹ್ಲಿ ಲಭ್ಯತೆಯ ಬಗ್ಗೆ ಇನ್ನೂ ತಿಳಿದಿಲ್ಲ, ಆದ್ದರಿಂದ ಅವರು ರಾಜ್ ಕೋಟ್ ಟೆಸ್ಟ್ ನಿಂದ ಹೊರಗುಳಿಯುವ ಸಾಧ್ಯತೆಯಿದೆ.

ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವ ಕೊಹ್ಲಿಯ ಹಿಂದಿನ ನಿರ್ಧಾರದ ನಂತರ ಈ ಸುದ್ದಿ ಬಂದಿದೆ. ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಖಚಿತಪಡಿಸಿದ್ದಾರೆ. ತಮ್ಮ ಕುಟುಂಬದ ಜೊತೆ ಕಾಲಕಳೆಯಲು ಕೊಹ್ಲಿ ಟೆಸ್ಟ್ ಪಂದ್ಯದಿಂದ ಹೊರಗೊಳಿಯಲಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...