ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಟಮಕ ಬಳಿ ನಡೆದಿದೆ.
ಸುಮಾರು 65 ವರ್ಷ ಹಾಗೂ 35 ವರ್ಷದ ಸವಾರರಿಬ್ಬರು ಸಾವು ಕಂಡಿದ್ದಾರೆ. ಕೋಲಾರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.