
ಕೋಲಾರ: ರಾಷ್ಟ್ರೀಯ ಹೆದ್ದಾರಿ 75 ರ ವಿರುಪಾಕ್ಷಿ ಗೇಟ್ ಬಳಿ ಘಟನೆ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಿರಪಾಕ್ಷಿ ಗೇಟ್ ಬಳಿ ಘಟನೆ ನಡೆದಿದೆ. ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.