
ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48) ಮತ್ತು ಅವರ ಪುತ್ರ ರಘು(26) ಮೃತಪಟ್ಟವರು ಎಂದು ಹೇಳಲಾಗಿದೆ.
ಶ್ರೀನಿವಾಸಪುರದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಪತ್ತೆಗಾಗಿ ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಲಾಗಿದೆ. ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.