ಕೋಲಾರ: ವಿವಿಧ ಸಂಘಟನೆಗಳು ಹಲವು ಬೆಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಕೋಲಾರ ಹಾಗೂ ಹಾಸನ ಜಿಲ್ಲಾ ಬಂದ್ ಗೆ ಕರೆ ನೀಡಿದ್ದಾರೆ.
ರಸ್ತೆ ನಿರ್ಮಾಣ, ಬೀದಿ ದೀಪ, ಕಸ ವಿಲೇವಾರಿ, ಬೀದಿನಾಯಿ ಹಾವಳಿ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕೋಲಾರ ಜನರು ಕೋಲಾರ ಬಂದ್ ಗೆ ಕರೆ ನೀಡಿದ್ದಾರೆ.
ಈಗಾಗಲೇ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ ಸಮಸ್ಯೆ ಬಗೆಹರಿಸದ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾ ಬಂದ್ ಮಾಡಿ ಜನರು ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಸಂಘಟನೆಗಳು ಬೈಕ್ ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
ಬಂದ್ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಸರ್ಕಾರಿ ಶಾಲಾ-ಕಾಲೇಜಿಗೆ ಯಾವುದೇ ರಜೆ ಇಲ್ಲ. ಕೋಲಾರ ನಗರದಾದ್ಯಂತ ಪೊಲಿಸ್ ಭದ್ರತೆ ಕೈಗೊಳ್ಳಲಾಗಿದೆ.
ಮತ್ತೊಂದೆಡೆ ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಹಾಸನ ಜಿಲ್ಲೆ ಅರಸಿಕೆರೆ ಬಂದ್ ಗೆ ಶಾಸಕ ಶಿವಲಿಂಗೇಗೌಡ ಕರೆ ನೀಡಿದ್ದಾರೆ. ಅರಸಿಕೆರೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆದಿದೆ.