ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ಇಂದು ವಿವಿಧ ಸಂಘಟನೆಗಳಿಂದ ಕೋಲಾರ ನಗರ ಬಂದ್ ಗೆ ಕರೆ ನೀಡಲಾಗಿದೆ.
ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಕೋಲಾರ ಬಂದ್ ನಡೆಸಲಿದ್ದು, ದಲಿತ ಪರ, ಪ್ರಗತಿಪರ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಜಿಲ್ಲಾ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಕೋಲಾರ ಬಂದ್ ಗೆ ಬೆಂಬಲ ಸೂಚಿಸಿದ್ದು, ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಕೋಲಾರ ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ಘೋಷಿಸಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಣ ತಿಳಿಸಿದ್ದಾರೆ.