alex Certify ದತ್ತಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಖಂಡಿಸಿ ಇಂದು ಕೋಲಾರ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದತ್ತಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಖಂಡಿಸಿ ಇಂದು ಕೋಲಾರ ಬಂದ್

ಕೋಲಾರ: ಚಿಕ್ಕಮಗಳೂರಿಗೆ ತೆರಳುತ್ತಿದ್ದ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ಖಂಡಿಸಿ ಇಂದು ಕೋಲಾರ ಬಂದ್ ಗೆ ಕರೆ ನೀಡಲಾಗಿದೆ.

ಹಿಂದೂಪರ ಸಂಘಟನೆಗಳು ನವೆಂಬರ್ 18 ರ ಇಂದು ಕೋಲಾರ ಬಂದ್ ಗೆ ನೀಡಿದ್ದು, ಬಂದ್ ನಲ್ಲಿ ಭಾಗವಹಿಸಲು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಕೋರ್ಟ್ ನಲ್ಲಿ ತಡೆಯಾಜ್ಞೆ ತಂದು ಕೋಲಾರಕ್ಕೆ ತೆರಳುವುದಾಗಿ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಇತ್ತೀಚೆಗೆ ಚಿಕ್ಕಮಗಳೂರಿಗೆ ದತ್ತ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದನ್ನು ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...