
ಕೋಲಾರ: ಕಾರ್ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ.
ಕೋಲಾರ ತಾಲೂಕಿನ ಶಾಪೂರು ಬಳಿ ಮರಕ್ಕೆ ಕಾರ್ ಡಿಕ್ಕಿಯಾಗಿತ್ತು. ಚಾಲಕ ವಿಮಲ್(27) ಶೆರಿನಾ(22) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರ್ಷಿತಾ, ಡೇವಿಡ್, ವಿಮೋನಿಯಲ್ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಇವರು ಬೆಂಗಳೂರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತರಾಗಿದ್ದಾರೆ. ಚೆನ್ನೈನಿಂದ ಬಾಡಿಗೆ ಕಾರ್ ನಲ್ಲಿ ಬೆಂಗಳೂರಿಗೆ ಹಿಂತಿರುಗುವಾಗ ದುರಂತ ಸಂಭವಿಸಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.