ಬೆಂಗಳೂರು: ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳ ನಡುವೆ ಪೈಪೋಟಿ ಶುರುವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಸಂಚಾರದ ಬೆನ್ನಲ್ಲೇ ಪೈಪೋಟಿ ಆರಂಭವಾಗಿದೆ.
ಹೈಕಮಾಂಡ್ ಹೇಳಿದಲ್ಲಿ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಈಗಾಗಲೇ ತಿಳಿಸಿದ್ದಾರೆ. ಜಿಲ್ಲಾ ನಾಯಕರ ಒತ್ತಾಸೆಗೆ ಇಲ್ಲವೆನ್ನಲು ಆಗುವುದಿಲ್ಲವೆಂದು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ವಿ.ಆರ್. ಸುದರ್ಶನ್, ಕೋಲಾರ ಜಿಲ್ಲಾ ಕಿಸಾನ್ ಘಟಕದ ಗೋವಿಂದೇಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ ಅವರು ಕೋಲಾರ ಕಾಂಗ್ರೆಸ್ ಅಭ್ಯರ್ಥಿಗಳಾಗಲು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳ ನಡುವೆ ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳ ನಡುವೆ ಪೈಪೋಟಿ ಆರಂಭವಾಗಿದೆ.