ಕೋಲಾರ: ಕೋಲಾರ ನಗರಸಭೆ ಸದಸ್ಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೇಲೆ ಕೋಲಾರ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಕೋಲಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಎಸ್ಪಿ ದೇವರಾಜ್ ಗುಂಡೇಟು ತಿಂದು ಗಾಯಗೊಂಡ ಬಾಲಾಜಿ ಸಿಂಗ್ ವಿಚಾರಣೆ ನಡೆಸಿದ್ದಾರೆ.
ಕೋಲಾರ ನಗರಸಭೆ ಸದಸ್ಯ ಜಗನ್ ಮೋಹನ್ ಕೊಲೆ ಆರೋಪಿಯಾಗಿರುವ ಬಾಲಾಜಿ ಸಿಂಗ್ ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆಯೇ ಬಾಲಾಜಿ ಸಿಂಗ್ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿಯಲಾಗಿದೆ.
ಮುಳಬಾಗಿಲು ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ಫೈರಿಂಗ್ ಮಾಡಿದ್ದಾರೆ. ಆರೋಪಿಯನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.